ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜ್ಯಪಾಲ ಆರ್.ಎನ್. ರವಿ (R.N. Ravi) ಅವರು ತಮ್ಮ ವಿಶೇಷ ಅಧಿಕಾರವನ್ನು ಬಳಸಿ ಮಮತಾ ಬ್ಯಾನರ್ಸಂಜಿ ಸಂಪುಟವನ್ನು ವಜಾಗೊಳಿಸಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದ್ದರೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ರಾಜೀನಾಮೆ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ, ರಾಜ್ಯಪಾಲರು ಸಂವಿಧಾನದ ಪ್ರಕಾರ ತಮ್ಮ ವೀಟೋ ಸ್ವರೂಪದ ಅಧಿಕಾರವನ್ನು ಬಳಸಿಕೊಂಡು ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ.
ಸಂವಿಧಾನದ 174(2)(b) ವಿಧಿಯ ಅಡಿಯಲ್ಲಿ ತೆಗೆದುಕೊಳ್ಳಲಾದ ಈ ನಿರ್ಣಯವನ್ನು ಮುಖ್ಯ ಕಾರ್ಯದರ್ಶಿ ದುಷ್ಯಂತ್ ನರಿಯಾಲ (Dushyant Nariyal) ಅವರು ರಾಜ್ಯಪಾಲರ ಸೂಚನೆಯ ಮೇರೆಗೆ ಪ್ರಕಟಿಸಿದ್ದಾರೆ. ಇದರಿಂದ ರಾಜ್ಯ ಸರ್ಕಾರವು ಕಾನೂನಾತ್ಮಕವಾಗಿ ಅಸ್ತಿತ್ವ ಕಳೆದುಕೊಂಡಿದೆ.
