ಮುಂಬೈ: ರಣಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ಅಭಿನಯಿಸಿರುವ ‘ರಾಮಾಯಣ’ ಚಿತ್ರದ ‘ಮಂಗಳ್ ರಂಗ್’ ಹಾಡು ಹಿಂದಿ, ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಿದೆ.
ಎ.ಆರ್. ರೆಹಮಾನ್ ಸಂಗೀತ ಸಂಯೋಜಿಸಿರುವ ಹಿಂದಿ ಹಾಡಿಗೆ ಅರಿಜಿತ್ ಸಿಂಗ್ ಮತ್ತು ಶ್ರೇಯಾ ಘೋಷಾಲ್ ಧ್ವನಿಯಾಗಿದ್ದಾರೆ. ರಾಮ-ಸೀತೆಯ ಪ್ರೀತಿ, ನಂಬಿಕೆ ಹಾಗೂ ಸಂಬಂಧದ ಪಾವಿತ್ರ್ಯವನ್ನು ಹಾಡು ಕಟ್ಟಿಕೊಡುತ್ತದೆ.

ನಿತೇಶ್ ತಿವಾರಿ ನಿರ್ದೇಶನದ, ನಮಿತ್ ಮಲ್ಹೋತ್ರಾ ನಿರ್ಮಾಣದ ಚಿತ್ರದಲ್ಲಿ ಯಶ್ ರಾವಣನಾಗಿ, ಸನ್ನಿ ಡಿಯೋಲ್ ಹನುಮಂತನಾಗಿ ನಟಿಸಿದ್ದಾರೆ. ಮೊದಲ ಭಾಗ ನವೆಂಬರ್ 5, 2026ರಂದು ಬಿಡುಗಡೆಯಾಗಲಿದ್ದು, ಎರಡನೇ ಭಾಗವನ್ನು 2027ರ ದೀಪಾವಳಿಗೆ ಬಿಡುಗಡೆ ಮಾಡಲು ಯೋಜಿಸಲಾಗಿದೆ.
